ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿ ಪರಿಹಾರಕ್ಕೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆಯಾಗಿದ್ದು, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.9ರಷ್ಟು ಹೆಚ್ಚು ಮಳೆಯಾಗಿದೆ ಎಂದರು.
ರಾಜ್ಯದಲ್ಲಿ ಮಳೆಯಿಂದ ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ವಾಹಣೆಗೆ ಎಲ್ಲಾ ಜಿಲ್ಲೆಗಳಿಗೂ ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ 6 ಜಿಲ್ಲೆಗಳಲ್ಲಿ 5 ಎನ್ ಡಿಆರ್ ಎಫ್ ತಂಡ ರಚಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದ 2225 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಗುರುತಿಸಲಾಗಿದ್ದು, 1200ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಾರ್ಯಪಡೆ ರಚಿಸಲಾಗಿದೆ. ನೆರೆ ನಿರ್ವಹಣೆಗೆ ಪ್ರತಿ ಜಿಲ್ಲೆಗೂ ಉಸ್ತುವಾರಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅವರು ವಿವರಿಸಿದರು.