ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಶದಲ್ಲಿದ್ದ ಯೆಮೆನ್ ನ ಹೊಯಿಡಾ ಬಂದರು ಮೇಲೆ ಇಸ್ರೇಲ್ ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಮೂವರು ಮೃತಪಟ್ಟಿದ್ದಾರೆ.
ಆರ್ಥಿಕತೆಯಲ್ಲಿ ಅರೆಬಿಯಾದ ಅತ್ಯಂತ ಹಿಂದುಳಿದ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದರಿಂದ ಬಂದರು ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಸ್ರೇಲ್ ಜನರ ರಕ್ತದಕ್ಕೆ ಪ್ರತಿಕಾರ ಎಂದು ಇಸ್ರೇಲ್ ರಕ್ಷಣಾ ಸಚಿವ ಯೊವ್ ಗಲೋಟ್ ಹೇಳಿಕೊಂಡಿದ್ದು, ನಮ್ಮ ಮೇಲೆ ದಾಳಿ ಮಾಡುವ ಧೈರ್ಯ ತೋರಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದಾಳಿಗಳು ನಡೆಯಲಿವೆ ಎಂದು ಎಚ್ಚರಿಸಿದ್ದಾರೆ.