Thursday, November 21, 2024
Google search engine
Homeತಾಜಾ ಸುದ್ದಿಅಮೆರಿಕ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ಬಿಡೈನ್, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಕಣಕ್ಕೆ!

ಅಮೆರಿಕ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ಬಿಡೈನ್, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಕಣಕ್ಕೆ!

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಜೋ ಬಿಡೈನ್ ಅಧಿಕೃತವಾಗಿ ಹಿಂದೆ ಸರಿದಿದ್ದು, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬಿಡೈನ್ ಸತತ ಎರಡನೇ ಬಾರಿ ಆಯ್ಕೆ ಬಯಸಿ ಸ್ಪರ್ಧೆಗೆ ಇಳಿದಿದ್ದರು. ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದ್ದು, ಜೋ ಬಿಡೈನ್ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಡೆಮಾಕ್ರೆಟಿಕ್ ಪಾರ್ಟಿಯಿಂದ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಆರಂಭಿಕ ಹಂತದ ಚುನಾವಣಾ ಪ್ರಚಾರದಲ್ಲಿ ಮೇಲುಗೈ ಸಾಧಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments