Friday, October 18, 2024
Google search engine
Homeತಾಜಾ ಸುದ್ದಿUnion Budget : ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ 1 ತಿಂಗಳ ವೇತನ ನೀಡಲಿರುವ ಕೇಂದ್ರ!

Union Budget : ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ 1 ತಿಂಗಳ ವೇತನ ನೀಡಲಿರುವ ಕೇಂದ್ರ!

ಹೊಸದಾಗಿ ಕೆಲಸಕ್ಕೆ ಸೇರುವ ನವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಒಂದು ತಿಂಗಳ ವೇತನ ಪಾವತಿಸಲಿದೆ.

ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಗಳವಾರ ಮಂಡಿಸಿದ ಪೂರ್ಣ ಪ್ರಮಾಣದ ಬಜೆಟ್ ನಲ್ಲಿ ನಿರುದ್ಯೋಗ ಸಮಸ್ಯೆಯತ್ತ ಬೆಳಕು ಚೆಲ್ಲಿದರು.

ಯಾವುದೇ ರೀತಿಯ ಹೊಸದಾಗಿ ಕೆಲಸಕ್ಕೆ ಸೇರಿದ ಉದ್ಯೋಗಿಗಳಿಗೆ ಒಂದು ತಿಂಗಳ ಸಂಬಳವನ್ನು ಸರ್ಕಾರ ನೀಡಿದೆ ಎಂದು ನಿರ್ಮಲಾ ಸೀತರಾಮನ್ ಘೋಷಿಸಿದರೂ ಎಷ್ಡು ಮೊತ್ತ ಎಂದು ನಿರ್ದಿಷ್ಟವಾಗಿ ಹೇಳಲಿಲ್ಲ.

ಪ್ರಾವಿಡೆಂಡ್ ಫಂಡ್ ಗೆ ನೇರವಾಗಿ ಕೇಂದ್ರ ಸರ್ಕಾರ ಒಂದು ತಿಂಗಳ ನೇರವಾಗಿ ಪಾವತಿಸಲಿದೆ ಎಂದು ಅವರು ಹೇಳಿದರು.

ಈ ಪ್ರಯೋಜನ 2.10 ಕೋಟಿ ನಿರುದ್ಯೋಗಿಗಳಿಗೆ ನೆರವಾಗಲಿದೆ. ಅಲ್ಲದೇ ಉದ್ಯೋಗಕ್ಕೆ ಸೇರಲು ಆಸಕ್ತಿ ಇಲ್ಲದ ಯುವಜನತೆಗೆ ಸ್ಫೂರ್ತಿಯಾಗಲಿದೆ ಎಂದು ಅವರು ಹೇಳಿದರು.

ಇದೇ ವೇಳೆ 1 ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಮೂಲಕ 500 ಕಂಪನಿಗಳಲ್ಲಿ ಅವಕಾಶ ನೀಡಲಾಗುವುದು. ಇದರಿಂದ ಒಟ್ಟಾರೆ 4.5 ಕೋಟಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ವಿವರಿಸಿದರು.

ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆಗೆ ಯಾವ ಪ್ರಯತ್ನ ಮಾಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments