ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯದಲ್ಲಿ ದಾಖಲೆ ಕುಸಿತ ಕಂಡಿದೆ.
ಸೋಮವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಆರಂಭದಲ್ಲೇ ಅಲ್ಪ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ಮಂಗಳವಾರ ಬಜೆಟ್ ಮಂಡನೆ ಪೂರ್ಣಗೊಳ್ಳುತ್ತಿದ್ದಂತೆ ದಿಢೀರನೆ ಕುಸಿತ ಕಂಡಿದೆ.
ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 986 ಅಂಕಗಳಷ್ಟು ಗರಿಷ್ಠ ಕುಸಿತ ಕಂಡಿದೆ. ನಿಫ್ಟಿ 41.80 ಅಂಕ ಕುಸಿತ ಕಂಡಿದೆ. ಇದರಿಂದ ರೂಪಾಯಿ ಮೌಲ್ಯ ಕೂಡ ದಾಖಲೆ ಮಟ್ಟಕ್ಕೆ ಕುಸಿತ ಕಂಡಿದೆ. ರೂಪಾಯಿ ಮೌಲ್ಯ 83.6775ಕ್ಕೆ ಕುಸಿತ ಕಂಡಿದ್ದು ಪಾತಾಳ ಕಂಡಿದೆ.
ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ ಕಂಡಿದ್ದು, ಬಂಡವಾಳ ಹೂಡಿಕೆದಾರರಿಗೆ ಭಾರೀ ನಿರಾಸೆ ಉಂಟು ಮಾಡಿದೆ ಎಂದು ಹೇಳಲಾಗಿದೆ. ಬಜೆಟ್ ಪರಾಮರ್ಶೆ ನಂತರ ಮತ್ತೆ ಚೇತರಿಕೆ ಕಾಣುವ ವಿಶ್ವಾಸವಿದೆ ಎಂದು ಹೇಳಲಾಗಿದೆ.