Friday, October 18, 2024
Google search engine
Homeಕ್ರೀಡೆರಾಜಸ್ಥಾನ್ ರಾಯಲ್ಸ್ ಗೆ ಕೋಚ್ ಆಗಲಿರುವ ರಾಹುಲ್ ದ್ರಾವಿಡ್?

ರಾಜಸ್ಥಾನ್ ರಾಯಲ್ಸ್ ಗೆ ಕೋಚ್ ಆಗಲಿರುವ ರಾಹುಲ್ ದ್ರಾವಿಡ್?

ಭಾರತ ತಂಡದ ಮುಖ್ಯ ಕೋಚ್ ಸ್ಥಾನದಿಂದ ನಿರ್ಗಮಿಸಿದ ನಂತರ ರಾಹುಲ್ ದ್ರಾವಿಡ್ ಐಪಿಎಲ್ ಟಿ-20 ತಂಡಕ್ಕೆ ಕೋಚ್ ಆಗಿ ಮರಳಿದ್ದಾರೆ.

ಭಾರತ ತಂಡಕ್ಕೆ ಟಿ-20 ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೆಕೆಆರ್ ಗೆ ಕೋಚ್ ಆಗುವ ಸಾಧ್ಯತೆಯನ್ನು ಮೂಲಗಳು ತಳ್ಳಿ ಹಾಕಿವೆ.

ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಹುಲ್ ದ್ರಾವಿಡ್ ನಡುವೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments