ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ.
ಹಾಸನ ಜಿಲ್ಲೆಯ ಕಡಗರವಳ್ಳಿ- ಯಡಕುಮಾರಿಯಲ್ಲಿ ಶುಕ್ರವಾರ ಗುಡ್ಡ ಕುಸಿತ ಪರಿಣಾಮ ಭಾರೀ ಪ್ರಮಾಣದಲ್ಲಿ ಕಲ್ಲುಬಂಡೆ ಮತ್ತು ಮಣ್ಣು ಜರಿದಿದೆ. ಇದರಿಂದ 8 ರೈಲು ಸಂಚಾರ ಮಾರ್ಗಗಳಲ್ಲಿ ವ್ಯತ್ಯಸ ಉಂಟಾಗಿದೆ.
ಗುಡ್ಡ ಕುಸಿತ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಮಣ್ಣು ಮತ್ತು ಗುಡ್ಡ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
ಇದೇ ವೇಳೆ ಚಾರ್ಮಾಡಿ ಘಾಟ್ ರಸ್ತೆಯ 10ನೇ ತಿರುವಿನಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿವೆ.
ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದರಿಂದ ಕೊಟಿಗೆಹಾರ ಬಳಿ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ.