Thursday, September 19, 2024
Google search engine
Homeತಾಜಾ ಸುದ್ದಿಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು; ಐಎಎಸ್ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್

ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು; ಐಎಎಸ್ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್

ತಳಮಹಡಿಯಲ್ಲಿ ನಡೆಸಲಾಗುತ್ತಿದ್ದ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ ಮಳೆ ನೀರು ನುಗ್ಗಿದ್ದರಿಂದ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

ರಾಜೀಂದರ್ ನಗರದಲ್ಲಿ ನಡೆಸಲಾಗುತ್ತಿದ್ದ ಕೋಚಿಂಗ್ ಸೆಂಟರ್ ಗೆ ಭಾರೀ ಮಳೆಯಿಂದ ನೀರು ನುಗ್ಗಿತ್ತು. ಕಾರ್ಯಾಚರಣೆ ನಂತರ ಮೂವರ ಶವಗಳನ್ನು ಭಾನುವಾರ ಬೆಳಿಗ್ಗೆ ಹೊರತೆಗೆಯಲಾಗಿದೆ.

ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡಾಲ್ವಿನ್ (26) ಮೃತಪಟ್ಟ ದುರ್ದೈವಿಗಳು. ವಿದ್ಯಾರ್ಥಿಗಳ ಮೃತಪಟ್ಟ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಕಟ್ಟಡದ ತಳಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಕೋಚಿಂಗ್ ಸೆಂಟರ್ ಮಾಲೀಕ ಹಾಗೂ ಕೋ-ಆರ್ಡಿನೇಟರ್ ಅವರನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments