Thursday, September 19, 2024
Google search engine
Homeತಾಜಾ ಸುದ್ದಿಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರಿಗೆ ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಎಂದು ಸುಳ್ಳು ಸುದ್ದಿ ಹರಡುವ ಮೂಲಕ ಅನಾವಶ್ಯಕ ದೂರು ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಈ ವಿಷಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಆರೋಪ ಬಂದಿದ್ದ ಮಾಂಸವನ್ನು ಲ್ಯಾಬ್ ಟೆಸ್ಟ್ ಗೆ ಕಳುಹಿಸಲಾಗಿತ್ತು. ವರದಿಯಲ್ಲಿ ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂದು ಬಂದಿದೆ. ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಇವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಸಾಗಿಸುತ್ತಾರೆ. ಆದರೆ ಇವರ ಮಾರಾಟಕ್ಕೆ ತೊಂದರೆ ಮಾಡುವ ಉದ್ಧೇಶದಿಂದ ದೂರು ನೀಡಿ ಡ್ರಾಮಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.

ನಾವು ರಾಜ್ಯದ ಜನತೆಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿಗಳು ಒಂದು ಆಯೋಗ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸ ಆಗಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments