Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ಜಿಲ್ಲಾ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಮಳೆಹಾನಿಗೆ ವಿಶೇಷ ನೆರವು: ಸಚಿವ ಕೆ.ಜೆ.ಜಾರ್ಜ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
KJ George
KJ George

ಚಿಕ್ಕಮಗಳೂರು: ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಮತ್ತು ಪ್ರವಾಹದಿಂದ ಆಗುತ್ತಿರುವ ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಭೇಟಿಗೆ ಸದ್ಯದಲ್ಲೇ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗುವುದು. ಈ ಹಿನ್ನೆಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಮತ್ತು ಒಟ್ಟಾರೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿ ಬಗ್ಗೆ ತಿಳಿಯಲು ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿದ್ದೇನೆ. ಸಮಸ್ಯೆಗಳಿಗೆ ತಕ್ಷಣ ತಾತ್ಕಾಲಿಕ ಪರಿಹಾರ ಕಲ್ಪಿಸುವುದರ ಜತೆಗೆ ಶಾಶ್ವತ ಪರಿಹಾರಕ್ಕೂ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದ್ದೇನೆ. ಈ ಎಲ್ಲಾ ವಿಚಾರಗಳನ್ನು ಜಿಲ್ಲೆಯ ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಯವರೊಂದಿಗಿನ ಭೇಟಿ ವೇಳೆ ಚರ್ಚಿಸಲಾಗುವುದು ಎಂದರು.

350 ಮನೆಗಳಿಗೆ ಹಾನಿ

ಮಳೆಹಾನಿ ಕುರಿತಂತೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 64ರಷ್ಟು ಹೆಚ್ಚುವರಿ ಮಳೆ ಜಿಲ್ಲೆಯಲ್ಲಿ ಬಂದಿದ್ದು, ಇದರಿಂದ 350 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 111 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಉಳಿದ ಮನೆಗಳು ಬಹುತೇಕ ಹಾನಿಗೊಳಗಾಗಿವೆ. ಕಳೆದ ಎರಡು ದಿನಗಳಲ್ಲಿ ಕುಸಿದಿರುವ ಮನೆಗಳನ್ನು ಹೊರತುಪಡಿಸಿ ಇತರೆ ಹಾನಿಗೊಳಗಾದ ಮನೆಗಳಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಶೇ.25ಕ್ಕಿಂತ ಹೆಚ್ಚು ಹಾನಿಗೊಳಗಾದ ಮನೆಗಳಿಗೆ 1.20 ಲಕ್ಷ ರೂ. ಮತ್ತು ಅದಕ್ಕಿಂತ ಕಡಿಮೆ ಹಾನಿಗೊಳಗಾದ ಮನೆಗಳಿಗೆ 6,500 ರೂ. ತಾತ್ಕಾಲಿಕ ಪರಿಹಾರ ವಿತರಿಸಲಾಗಿದೆ ಎಂದರು.

ಅದೇ ರೀತಿ ರಸ್ತೆ ಮತ್ತು ಸೇತುವೆಗಳಿಗೂ ಹಾನಿಯಾಗಿದ್ದು, ಸುಮಾರು 55 ಕೋಟಿ ರೂ. ಹಾನಿಯಾಗಿದೆ. ಕೆಲವೆಡೆ ಸಂಪರ್ಕ ಕಡಿದಿದ್ದು, ಅಂತಹ ಪ್ರದೇಶಗಳ ಸಂಪರ್ಕಕ್ಕೆ ಬೇರೆ ಮಾರ್ಗಗಳ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮಾವತಿ ಮಾಹಿತಿ ನೀಡಿ, “ಮಳೆ ಮತ್ತು ಗಾಳಿಯಿಂದ ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್ ಗಳಿಗೆ ಹಾನಿಯಾಗಿ ಮೆಸ್ಕಾಂಗೆ 8.5 ಕೋಟಿ ರೂ. ನಷ್ಟವಾಗಿದೆ. ದುರಸ್ತಿ ಕಾರ್ಯವನ್ನು ತ್ವರಿತಗೊಳಿಸಲಾಗಿದ್ದು, ಹೆಚ್ಚುವರಿ ಗ್ಯಾಂಗ್ ಮೆನ್ ಗಳನ್ನು ಒದಗಿಸಿ ದುರಸ್ತಿ ಕೆಲಸ ಮಾಡಿಸಲಾಗುತ್ತಿದೆ,” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಗಿರುವ ಹಾನಿಗಳಿಗೆ ನಿಯಮಾವಳಿ ಪ್ರಕಾರ ಪರಿಹಾರ ನೀಡಿದರೆ ಅದು ಸಾಕಾಗುವುದಿಲ್ಲ. ಹೀಗಾಗಿ ವಿಶೇಷ ಪರಿಹಾರಕ್ಕಾಗಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು. ಆ ಮೂಲಕ ಜಿಲ್ಲೆಗೆ ಹೆಚ್ಚಿನ ನೆರವು ಕೋರಲಾಗುವುದು ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment