ರಾಜ್ಯದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದ್ದು, ಕೇಂದ್ರ ಹವಾಮಾನ ಇಲಾಖೆ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಕಳೆದ ಭಾರೀ ಮಳೆಯಿಂದ 106 ಮನೆಗಳು ಹಾನಿಗೊಳಗಾಗಿದ್ದು, 31 ತಾಲೂಕುಗಳಲ್ಲಿ ಭೂಕುಸಿತ ಸಂಭವಿಸುವ ಭೀತಿ ಇದೆ ಎಂದು ಎಚ್ಚರಿಸಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯಲ್ಲಿ 5 ಮಂದಿ ಮಳೆಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವು ಪಟ್ಟಣಗಳು ಮುಳುಗಡೆ ಆಗಿವೆ. ತುಂಗಾಭದ್ರಾ ನದಿ ತುಂಬಿ ಹರಿಯತ್ತಿದೆ.