ಬೆಂಗಳೂರಿನ ಚಿಕ್ಕನಾಯಕನಹಳ್ಳಿಯ ಶಾಲೆಯೊಂದರ ಬಳಿ ನಿಲ್ಲಿಸಿದ್ದ ಟ್ಯಾಕ್ಟರ್ ಬಳಿ ಸ್ಫೋಟಕಗಳಿಗೆ ಬಳಸುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ರಾಮೇಶ್ವರಂ ಕೆಫೆ ಸ್ಫೋಟದ ನಂತರ ಸ್ಫೋಟಕ ಪತ್ತೆಯಾಗಿರುವುದು ನಾಗರಿಕರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದುಷ್ಕರ್ಮಿಯೊಬ್ಬ ಸ್ಫೋಟ ನಡೆಸಿದ್ದರಿಂದ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕಟ್ಟೇಚ್ಚರ ವಹಿಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪದಲ್ಲೇ ಸ್ಫೋಟಕ್ಕೆ ಬಳಸುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.
ಭಾನುವಾರ ರಾತ್ರಿ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಖಾಸಗಿ ಶಾಲೆಯೊಂದರ ಬಳಿ ನಿಂತಿದ್ದ ಟ್ಯಾಕ್ಟರ್ ನಲ್ಲಿ ಜಿಲೆಟಿನ್ ಕಡ್ಡಿಗಳನ್ನು ಪತ್ತೆ ಹಚ್ಚಿದ್ದು, ಟ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಟ್ಯಾಕ್ಟರ್ ಮಾಲೀಕರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ.