Thursday, September 19, 2024
Google search engine
Homeತಾಜಾ ಸುದ್ದಿBREAKING ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಕೂಡಲೇ ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಖಡಕ್...

BREAKING ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಕೂಡಲೇ ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ!

ಮಲೆನಾಡು ಮತ್ತು ಗಿರಿನಾಡು ಎಂದು ಗುರುತಿಸಲಾದ ರಾಜ್ಯದ ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿಯನ್ನು ಒಂದು ತಿಂಗಳಲ್ಲಿ ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.

ಭಾರೀ ಮಳೆಯಿಂದಾಗಿ ಶಿರೂರು ಗುಡ್ಡ ಕುಸಿತದಲ್ಲಿ 11 ಮಂದಿ ಮೃತಪಟ್ಟಿದ್ದು ಹಾಗೂ ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ 300ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆಗಳ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕಾರಣವಾಗುತ್ತಿರುವ ಅರಣ್ಯ ಒತ್ತುವರಿಯನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಉತ್ತರ ಕನ್ನಡ, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಬಡಾವಣೆ, ರೆಸಾರ್ಟ್, ಹೋಟೆಲ್, ತೋಟ ಮತ್ತು ಹೋಂ ಸ್ಟೇಗಳನ್ನು ತೆರವುಗೊಳಿಸಲು ಸೂಚಿಸಿದ್ದಾರೆ.

2015ರಿಂದ ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಕೂಡಲೇ ಒತ್ತುವರಿಯನ್ನು ತೆರವುಗೊಳಿಸಬೇಕು. ಈ ಬಗ್ಗೆ ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಸಚಿವ ಖಂಡ್ರೆ ಸೂಚಿಸಿದ್ದಾರೆ.

landslide

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments