Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್: 4ನೇ ಸ್ಥಾನಕ್ಕೆ ಕುಸಿದ ಮನು ಭಾಕರ್ ಹ್ಯಾಟ್ರಿಕ್ ಕನಸು ಭಗ್ನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
manu bhaker

ಸತತ ಎರಡು ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಭಾರತದ ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್  ಹ್ಯಾಟ್ರಿಕ್ ಪದಕ ಗಳಿಸುವ ಕನಸು ಭಗ್ನಗೊಂಡಿದೆ.

ಶನಿವಾರ ನಡೆದ ವನಿತೆಯರ 25 ಮೀ. ಏರ್ ಪಿಸ್ತೂಲ್ ವಿಭಾಗದ ಫೈನಲ್ ಸುತ್ತಿನಲ್ಲಿ 22 ವರ್ಷದ ಮನು ಭಾಕರ್ 4ನೇ ಸ್ಥಾನಕ್ಕೆ ಕುಸಿಯುವ ಮೂಲಕ ಕೂದಲೆಳೆ ಅಂತರದಿಂದ ಪದಕ ಗಳಿಸುವ ಅವಕಾಶದಿಂದ ವಂಚಿತರಾದರು.

ಒಂದೇ ಆವೃತ್ತಿಯ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದು ಆತ್ಮವಿಶ್ವಾಸದ ಕಡಲಲ್ಲಿ ತೇಲುತ್ತಿದ್ದ ಮನು ಭಾಕರ್ ಮೊದಲ ಸುತ್ತಿನ 5 ರೌಂಡ್ ಗಳಲ್ಲಿ 2 ಮಾತ್ರಕ್ಕೆ ಗುರಿ ಇಡುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದರು.

ಆದರೆ ಎರಡನೇ ಸುತ್ತಿನಲ್ಲಿ 5 ಸುತ್ತುಗಳ ಪೈಕಿ 4ರಲ್ಲಿ ಗುರಿ ಇಟ್ಟು ಭರ್ಜರಿಯಾಗಿ ಪದಕದ ರೇಸ್ ಗೆ ಮರಳಿದ್ದೂ ಅಲ್ಲದೇ 2ನೇ ಸ್ಥಾನಕ್ಕೆ ಜಿಗಿದಿದ್ದರು. ಆದರೆ ಮೂರನೇ ಸುತ್ತಿನಲ್ಲಿ 5 ಸುತ್ತುಗಳ ಪೈಕಿ 4ರಲ್ಲಿ ಯಶಸ್ಸು ಸಾಧಿಸಿ 1ರಲ್ಲಿ ಎಡವಿದ್ದರಿಂದ ಮತ್ತೆ ಮೂರನೇ ಸ್ಥಾನಕ್ಕೆ ಕುಸಿದರು.

ಮನು ಭಾಕರ್ 10 ಮೀ. ಏರ್ ಪಿಸ್ತೂಲ್ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ಮತ್ತು ಮಿಶ್ರ ಡಬಲ್ಸ್ ನಲ್ಲಿ ಸರ್ಬಜೀತ್ ಸಿಂಗ್ ಜೊತೆ ತಲಾ ಒಂದು ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ನಂತರ ಭಾರತದ ಮಹಿಳಾ ಕ್ರೀಡಾಪಟುವೊಬ್ಬರು ಶೂಟಿಂಗ್ ನಲ್ಲಿ ಹಾಗೂ ಎರಡು ಪದಕ ಗೆದ್ದ ಮೊದಲ ಮಹಿಳೆ ಎಂಬ ಐತಿಹಾಸಿಕ ದಾಖಲೆ ಬರೆದಿದ್ದರು.

25 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಆರಂಭದ ಸುತ್ತಿನಲ್ಲಿ ಅನುಭವಿಸಿದ ಹಿನ್ನಡೆ ಮನು ಭಾಕರ್ ಪಾಲಿಗೆ ಮುಳ್ಳಾಗಿದ್ದು, ನಂತರ ಅಮೋಘವಾಗಿ ಚೇತರಿಸಿಕೊಂಡು ತಿರುಗೇಟು ನೀಡಿದರೂ ಪ್ರತಿ ಸುತ್ತಿನಲ್ಲಿ ಪ್ರಬಲ ಹೋರಾಟ ನಡೆಸಿದರೂ ಫಲ ನೀಡಲಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment