ಯಾದಗಿರಿಯಲ್ಲಿ ಅನುಮಾನಾಸ್ಪದ, ನಿಗೂಢವಾಗಿ ಸಾವನ್ನಪ್ಪಿದಂತ ಪಿಎಸ್ಐ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಂಡಿದೆ. PSI ಪರಶುರಾಮ್ ರವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಶ್ ಕಿಡಿಕಾರಿದ್ದರು.
ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೊಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದರು.
ಈ ನಂತ್ರ, ಆರ್ ಅಶೋಕ್ ಸೇರಿದಂತೆ ಪ್ರತಿಪಕ್ಷಗಳ ನಾಯಕರು, ಮುಖಂಡರು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದರು. ಆದರೇ ರಾಜ್ಯ ಸರ್ಕಾರವು ಪಿಎಸ್ಐ ಪರಶುರಾಮ್ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.