ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಇತಿಹಾಸ ಬರೆದಿದ್ದಾರೆ.
ಚೆನ್ನೈ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 1 ಸಿಕ್ಸರ್ ಸಹಾಯದಿಂದ 21 ರನ್ ಬಾರಿಸಿದರು. ಈ ಮೂಲಕ ಟಿ-20 ಕ್ರಿಕೆಟ್ ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಪಾತ್ರರಾದರು.
ಕೊಹ್ಲಿ 12 ಸಾವಿರ ರನ್ ಪೂರೈಸಿದ್ದರಿಂದ ಅತೀ ಹೆಚ್ಚು ರನ್ ಬಾರಿಸಿದ ಆರನೇ ಆಟಗಾರ ಎನಿಸಿಕೊಂಡರು. ವೆಸ್ಟ್ ಇಂಡೀಸ್ ದೈತ್ಯ ಗೇಲ್ 14,562 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಶೋಯೆಬ್ ಮಲಿಕ್ 13,360 ರನ್ ಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ.
ಕೀರನ್ ಪೊಲಾರ್ಡ್ 12,900 ರನ್ ಗಳಿಸಿ ಮೂರನೇ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ನ ಅಲೆಕ್ಸ್ ಹೇಲ್ಸ್ 12,319 ರನ್ ಗಳಿಸಿ ನಾಲ್ಕನೇ ಸ್ಥಾನ ಗಳಿಸಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ರನ್ ಬಾರಿಸಿ 5ನೇ ಸ್ಥಾನ ಪಡೆದಿದ್ದಾರೆ.
ವಿರಾಟ್ ಕೊಹ್ಲಿ 377 ಪಂದ್ಯಗಳಲ್ಲಿ 360ನೇ ಇನಿಂಗ್ಸ್ ಗಳಲ್ಲಿ 12,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.