ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಿದೆ.
ಮದ್ಯ ಮಾರಾಟ ನಿಯಮದ ಹಗರಣದ ಆರೋಪದಲ್ಲಿ ಕಿಂಗ್ ಪಿನ್ ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿತ್ತು. ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.
ಸುದೀರ್ಘ ವಿಚಾರಣೆ ನಡೆಸಿದ ದೆಹಲಿ ರೋಸ್ ಅವರ್ಟ್ ನ್ಯಾಯಾಲಯ ಮಾರ್ಚ್ 28ರವರೆಗೆ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲು ಇಡಿ ವಶಕ್ಕೆ ನೀಡಿತು.