Monday, November 25, 2024
Google search engine
Homeಜಿಲ್ಲಾ ಸುದ್ದಿನಿಶ್ಚಿತಾರ್ಥ ಮಾಡಿಕೊಂಡ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಪ್ರಿಯಕರ ಆತ್ಮಹತ್ಯೆ

ನಿಶ್ಚಿತಾರ್ಥ ಮಾಡಿಕೊಂಡ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಪ್ರಿಯಕರ ಆತ್ಮಹತ್ಯೆ

ಪ್ರಿತಿಸುತ್ತಿದ್ದ ಯುವತಿ ಮನೆಯಲ್ಲಿ ನೋಡಿದ ಹುಡುಗನ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಮಾನ್ವಿ ನಿವಾಸಿ ವರುಣ್ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮನೆಯಲ್ಲಿ ನೋಡಿದ ಹುಡುಗನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ನೊಂದ ವರುಣ್ ಮನೆಯಲ್ಲಿ ಯಾರೂ ಇಲ್ಲದಾಗ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ,

ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments