ಭಾರತೀಯ ರೈಲ್ವೆಯು 1376 ಪ್ಯಾರಾ ಮೆಡಿಕಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 17ರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ರೈಲ್ವೆಸ್ ಪ್ಯಾರಾ ಮೆಡಿಕಲ್ ವಿಭಾಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 17ರಿಂದ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್ 16 ಕೊನೆಯ ದಿನವಾಗಿದೆ.
ಅರ್ಹರು ಭಾರತೀಯ ರೈಲ್ವೆಯ ಅಧಿಕೃತ ವೆಬ್ ಸೈಟ್ rrbapply.gov.in.ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗಕ್ಕೆ ಸೇರಿದವರು 500 ರೂ. ಹಾಗೂ ಎಸ್ ಸಿ/ ಎಸ್ಟಿ ಮತ್ತು ದೈಹಿಕವಾಗಿ ವಿಕಲರಾದವರು 250 ರೂ. ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ.