ರಾಜ್ಯಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಲಿರುವ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದಕ್ಕಾಗಿ 15 ದಿನಗಳಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಪರೇಡ್ ಮೈದಾನದ ಸುತ್ತಮುತ್ತ 100ಕ್ಕೂ ಹೆಚ್ಚು ಸಿಸಿ ಟಿವಿ ಕಣ್ಗಾವಲು ಇಡಲಾಗಿದ್ದು, 2 ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದೆ. ಅಂಬ್ಯುಲೆನ್ಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್ಪೆಕ್ಟರ್ ಗಳು ಸೇರಿ 1583 ಅಧಿಕಾರಿ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯ ಕ್ಕೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಸಂಚಾರ ನಿರ್ವಹಣೆಗೆ 3 ಡಿಸಿಪಿ, 6 ಎಸಿಪಿ, 19 ಸಂಚಾರ ಇನ್ ಸ್ಪೆಕ್ಟರ್, ಮೈದಾನದ ಬಂದೋಬಸ್ತ್ರ ಕರ್ತವ್ಯಕ್ಕೆ 10 ಕೆಎಸ್ ಆರ್ ಪಿ, ಸಿಎಆರ್ ತುಕಡಿ ಮತ್ತು ಕ್ಯೂ ಆರ್ ಟಿ ಟೀಮ್, ಡಿ ಸ್ವಾಟ್ ಟೀಮ್, ಗರಡು ಪೋರ್ಸ್ ಪಡೆ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು
ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದಕೆ.ಆರ್.ರಸ್ತೆ & ಕಬ್ಬನ್ರಸ್ತೆ ಜಂಕ್ಷನ್ ವರೆಗೆ, 3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತ ದಿಂದ ಕ್ಲೀನ್ಸ್ ವೃತ್ತದವರೆಗೆ.
ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಮನವಿ ಮಾಡಿರುವ ಪೊಲೀಸರು, ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ-112ಗೆ ಕರೆಮಾಡಲು ಸೂಚಿಸಿದ್ದಾರೆ. ಸೆಲ್ಫಿ ಮೊಬೈಲ್ ಬಳಕೆಗೆ ನಿಷೇಧಿಸಲಾಗಿದೆ.
ಮಾಣಿಕ್ ಷಾ ಮೈದಾನಕ್ಕೆ ನಿಷೇಧ ವಸ್ತು
ಹರಿತವಾದ ವಸ್ತು ಹಾಗೂ ಚಾಕು-ಚೂರಿ
ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರ, ಕಪ್ಪು ಕರವಸ್ತ್ರ, ಬಣ್ಣದ ದ್ರಾವಣ ,
ತಿಂಡಿ, ತಿನಿಸುಗಳು, ವಿಡಿಯೋ ಮತ್ತು ಸ್ಟಿಲ್ ಕ್ಯಾಮರಾಗಳು. ಮದ್ಯದ ಬಾಟಲ್/ಮಾದಕ ವಸ್ತು,
ನೀರಿನ ಬಾಟಲ್ ಹಾಗೂ ಕ್ಯಾನ್, ಕೊಡೆ (ಛತ್ರಿ) ಶಸ್ತ್ರಾಸ್ತ್ರಗಳು
ಪಟಾಕಿ ಮತ್ತು ಸ್ಫೋಟಕ ವಸ್ತುಗಳು.