ಕೋಲ್ಕತಾದ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು 8 ವೈದ್ಯರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಅಲ್ಲದೇ ಪ್ರಮುಖ ಆರೋಪಿಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದ್ದಾರೆ.
ಒಂದು ಕಡೆ ಸಿಬಿಐ ಮತ್ತೊಂದು ಕಡೆ ಕೋಲ್ಕತಾ ಪೊಲೀಸರ ತನಿಖೆ ನಡುವೆ ಆಸ್ಪತ್ರೆಗೆ ನುಗ್ಗಿದ ಗುಂಪು ಆರ್ ಜೆ ಕಾರ್ ಮೆಡಿಕಲ್ ಕಾಲೇಜಿನಲ್ಲಿ ದಾಂಧಲೆ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವೈದ್ಯರು 24 ಗಂಟೆಗಳ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.
ಕೋಲ್ಕತಾ ಪೊಲೀಸರು ಆಸ್ಪತ್ರೆಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣದಲ್ಲಿ 19 ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಕೋಲ್ಕತಾ ಹೈಕೋರ್ಟ್ 7000 ಮಂದಿ ಆಸ್ಪತ್ರೆಗೆ ನುಗ್ಗುವ ಪ್ರಕರಣಕ್ಕೆ ಆಡಳಿತ ವೈಫಲ್ಯವೇ ಕಾರಣ ಎಂದು ಕಿಡಿ ಕಾರಿದೆ.