ಭಾರತ ತಂಡದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಗೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕ ಮಾಜಿ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಜಾಮೀನು ರಹಿತ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ ವಿಚಾರಣೆಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ.
ನ್ಯಾಯಮೂರ್ತಿ ನೀಲಾ ಘೋಖಲೆ ನೇತೃತ್ವದ ಪೀಠ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು. ಉತ್ತಪ್ಪ ಪರ ವಕೀಲರು ಸೆಪ್ಟೆಂಬರ್ 6ರೊಳಗೆ ವಿಚಾರಣೆಗೆ ಹಾಜರಾಗುವುದಾಗಿ ಭರವಸೆ ನೀಡಿದರು.
ಉತ್ತಪ್ಪ ನ್ಯಾಯಾಲಯ ಹಾಜರಾತಿಗೆ 30ದಿನಗಳ ಕಾಲವಕಾಶ ನೀಡಲಾಗಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ ನೀಡಿತು.
ರಾಬಿನ್ ಉತ್ತಪ್ಪ ಮಧ್ಯವರ್ತಿ ಕಂಪನಿ ಮೂಲಕ ಸೆನಾಟರ್ ಪ್ರವೇಟ್ ಲಿಮಿಟೆಡ್ ಕಂಪನಿ ಜೊತೆ ಉಡುಪುಗಳ ರಾಯಭಾರಿಯಾಗಿ ಜಾಹಿರಾತುಗಳನ್ನು ಕಾಣಿಸಿಕೊಂಡಿದ್ದರು. ನಂತರ ಸೆನಾಟರ್ ಕಂಪನಿ ಜೊತೆ ಉತ್ತಪ್ಪ ಸಂಬಂಧ ಕಡಿದುಕೊಂಡಿದ್ದರು.
ಉತ್ತಪ್ಪಗೆ ನಂತರ ನಡೆದ ಬೆಳವಣಿಗೆಗಳು ತಿಳಿಯಲಿಲ್ಲ. ಏಕೆಂದರೆ ನಂತರ ನಡೆದ ಪತ್ರ ವ್ಯವಹಾರಗಳು ಉತ್ತಪ್ಪ ಗಮನಕ್ಕೆ ಬಂದಿರಲಿಲ್ಲ. ಸಮನ್ಸ್ ಮತ್ತು ವಾರಂಟ್‌ಗಳು ಸೆಂಟಾರಸ್‌ನ ನೋಂದಾಯಿತ ಕಚೇರಿಗೆ ಹೋಗುತ್ತಿದ್ದವು.
ಉತ್ತಪ್ಪ ಅವರು ಏಪ್ರಿಲ್ 28, 2024 ರಂದು ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕರೆ ಮಾಡಿದಾಗ ಮಾತ್ರ ಬಾಕಿ ಇರುವ ಘೋಷಣೆ ಮತ್ತು ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿರುವುದು ತಿಳಿದುಕೊಂಡಿದ್ದಾರೆ.
ನಂತರ ಉತ್ತಪ್ಪ ಜಾಮೀನು ರಹಿತ ವಾರೆಂಟ್ ರದ್ದುಗೊಳಿಸುವಂತೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವನ್ನು ಸಂಪರ್ಕಿಸಿದರು ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಯಿತು, ಅವರನ್ನು ಹೈಕೋರ್ಟ್‌ಗೆ ಸಂಪರ್ಕಿಸಲು ಒತ್ತಾಯಿಸಿದರು.
ಶುಕ್ರವಾರ, ಉತ್ತಪ್ಪ ಅವರು ಚೆಕ್‌ಗೆ ಸಹಿ ಹಾಕಿಲ್ಲ ಅಥವಾ ಅವರು ಕಂಪನಿಯ ದೈನಂದಿನ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಸಕ್ರಿಯ ನಿರ್ದೇಶಕರಾಗಿಲ್ಲ ಎಂದು ಮಧ್ಯವರ್ತಿ ಕಂಪನಿ ವಾದಿಸಿತ್ತು.