Friday, November 22, 2024
Google search engine
HomeUncategorizedಸುಭದ್ರ ಸರ್ಕಾರ ಅಭದ್ರಗೊಳಿಸುವ ಪ್ರಯತ್ನ: ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಕಿಡಿ

ಸುಭದ್ರ ಸರ್ಕಾರ ಅಭದ್ರಗೊಳಿಸುವ ಪ್ರಯತ್ನ: ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿಯಾಗಿದ್ದು, ಈ ನಿರ್ಣಯದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಮಾಡಿರವ ರಾಜಕೀಯ ಷಡ್ಯಂತ್ರ ಇದಾಗಿದೆ. ರಾಜ್ಯಪಾಲರ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರು ಅಲ್ಲದೇ ಇನ್ನೂ ಕೆಲವರು ಕೈ ಜೋಡಿಸಿದ್ದಾರೆ. ಎಲ್ಲಾ ಮಾಹಿತಿಯೂ ನನಗೆ ಇದೆ. ಪ್ರಾಸಿಕ್ಯೂಷನ್ ಗೆ ನೀಡಿದ್ದಾರೆ ಅಂತ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಆರೋಪ ಇದ್ದರೂ ಯಾಕೆ ಇದುವರೆಗೆ ಯಾವುದೇ ಪ್ರಾಸಿಕ್ಯೂಷನ್ ಗೆ ಯಾಕೆ ನೀಡಿಲ್ಲ. ನನ್ನ ವಿರುದ್ಧ ಆರೋಪ ಬಂದ ಕೆಲವೇ ಗಂಟೆಗಳಲ್ಲಿ ನೋಟಿಸ್ ನೀಡಿದಾಗಲೇ ನಾನು ಈ ಬೆಳವಣಿಗೆ ನಿರೀಕ್ಷಿಸಿದ್ದೆ ಎಂದು ಅವರು ವಿವರಿಸಿದರು.

ನನ್ನ ಬೆಂಬಲಕ್ಕೆ ಹೈಕಮಾಂಡ್, ಇಡೀ ಸಚಿವ ಸಂಪುಟದ ಸಹದ್ಯೋಗಿಗಳು ಇದ್ದಾರೆ. ನಾನು ಈ ಬೆಳವಣಿಗೆಯಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ನಡೆಸುವೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments