ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಹಾಸನದಲ್ಲಿ ಹಾಲಿ ಸಂಸದ ಪ್ರಜ್ಞಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮೈತ್ರಿ ಜೊತೆ ಮೈತ್ರಿ ಹಿನ್ನೆಲೆಯಲ್ಲಿ ದೊರೆತ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಯಿತು.
ಮಂಡ್ಯದಿಂದ ಎಚ್.ಡಿ. ಕುಮಾರಸ್ವಾಮಿ, ಹಾಸನದಿಂದ ಪ್ರಜ್ಞಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಯಿತು.
ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅಂತಿಮಗೊಳಿಸಿದ್ದರು. ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಹಿಂದೆಯೇ ಖಚಿತವಾಗಿದ್ದರೂ ಅಧಿಕೃತವಾಗಿ ಪ್ರಕಟವಾಗಿರಲಿಲ್ಲ. ಇದೀಗ ಟಿಕೆಟ್ ಘೋಷಣೆ ಮಾಡಲಾಗಿದೆ.
ಮಲ್ಲೇಶ್ ಬಾಬು ಅವರು ಈ ಬಾರಿ ಬಂಗಾರಪೇಟೆಯಿಂದ ಕಣಕ್ಕೆ ಇಳಿದು ಕಾಂಗ್ರೆಸ್‌ನ ನಾರಾಯಣ ಸ್ವಾಮಿ ಮುಂದೆ ಸೋತಿದ್ದರು. ಪ್ರಜ್ವಲ್ ರೇವಣ್ಣ 2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಈಗ ಎರಡನೇ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ.