ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ರಮ ಆಸ್ತಿ ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಸುಮಾರು 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.
ಸಂಜೆ 4 ಗಂಟೆಯವರೆಗೂ ವಿಚಾರಣೆ ಎದುರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಲೋಕಾಯುಕ್ತಗಿಂತ ಸಿಬಿಐನವರೇ ಪರವಾಗಿಲ್ಲ. ಒಂದು ದಿನವೂ ಕರೆದಿರಲಿಲ್ಲ. ಏನನ್ನೂ ಕೇಳಿರಲಿಲ್ಲ, ಆದರೆ ಇವರು ಈಗಲೇ ಹಿಂಸೆ ಕೊಡೋಕೆ ಶುರು ಮಾಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದರು,
ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಕಳೆದ ವರ್ಷ ಹಿಂಪಡೆದು, ಲೋಕಾಯುಕ್ತಕ್ಕೆ ವಹಿಸಿತ್ತು. ನಂತರ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಸಂಸ್ಥೆ ಎಫ್‌ಐಆರ್ ದಾಖಲಿಸಿತ್ತು.