ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಕ್ ಕ್ಲಾಸೆನ್ ಸೇರಿದಂತೆ ಮೂವರು ಸಿಡಿಸಿದ ಅರ್ಧಶತಕಗಳ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ, ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್ ದಾಖಲಿಸಿದೆ. ಈ ಮೂಲಕ ಐಪಿಎಲ್ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ದಾಖಲಿಸಿ ದಾಖಲೆ ಬರೆದಿದೆ.
ಹೈದರಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ ಗಳಿಸಿತು.
ಹೈದರಾಬಾದ್ ಪರ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅರ್ಧಶತಕಗಳನ್ನು ಸಿಡಿಸಿದರು. ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಎರಡನೇ ವಿಕೆಟ್ ಗೆ 72 ರನ್ ಜೊತೆಯಾಟದಿಂದ ಆಧರಿಸಿದರು. ಹೆಡ್ 24 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 62 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 7 ಸಿಕ್ಸರ್ ನೊಂದಿಗೆ 53 ರನ್ ಗಳಿಸಿದರು.
ನಂತರ ಜೊತೆಯಾದ ಏಡಿಯನ್ ಮರ್ಕರಂ ಮತ್ತು ಹೆನ್ರಿಚ್ ಮರ್ಕರಂ ಮುರಿಯದ 4ನೇ ವಿಕೆಟ್ ಗೆ 116 ರನ್ ಜೊತೆಯಾಟದಿಂದ ಬೃಹತ್ ಮೊತ್ತದ ಕನಸು ನನಸು ಮಾಡಿದರು.
ಕ್ಲಾಸೆನ್ 34 ಎಸೆತಗಳಲ್ಲಿ 4 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ 80 ರನ್ ಬಾರಿಸಿ ಔಟಾಗದೇ ಉಳಿದರೆ, ಮರ್ಕರಂ 28 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 42 ರನ್ ಗಳಿಸಿದರು.