ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಗಾಬರಿ ಮತ್ತು ಆತಂಕ ಉಂಟಾಗಿದೆ. ಇನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಹೇಳಿದ್ದಾರೆ.
ಕೋಲ್ಕತಾ ಘಟನೆ ನಡೆದು 16 ದಿನಗಳ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿದ ರಾಷ್ಟ್ರಪತಿ, ನಮ್ಮ ಮಕ್ಕಳು ಮತ್ತು ಸೋದರಿಯರ ಮೇಲಿನ ದೌರ್ಜನ್ಯಕ್ಕೆ ನಿಲ್ಲಬೇಕು ಎಂದು ಕರೆ ನೀಡಿದರು.