ಹಣ್ಣಿನ ಜ್ಯೂಸ್ ಗೆ ಮೂತ್ರ ಬೆರೆಸಿ ಗ್ರಾಹಕರಿಗೆ ಕೊಡುತ್ತಿದ್ದ 15 ವರ್ಷದ ಬಾಲಕನನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ.
ಹಣ್ಣಿನ ಜ್ಯೂಸ್ ನಲ್ಲಿ ಮೂತ್ರ ವಿಸರ್ಜಿಸಿ ಮಿಕ್ಸ್ ಮಾಡಿ ಕೊಡುತ್ತಿದ್ದಾನೆ ಎಂದು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪೊಲೀಸರು ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ದೂರು ಆಧರಿಸಿ ಅಂಗಡಿ ಪರಿಶೀಲಿಸಿದ ಪೊಲೀಸರು ಪ್ಲಾಸ್ಟಿಕ್ ಕ್ಯಾನ್ ನಲ್ಲಿ ಮೂತ್ರ ಸಂಗ್ರಹಿಸಿ ಇಟ್ಟಿದ್ದನ್ನು ಪತ್ತೆ ಹಚ್ಚಿದ್ದಾರೆ. ಅಂಗಡಿ ಮಾಲೀಕನನ್ನು ಮೂತ್ರ ಸಂಗ್ರಹಿಸಿದ್ದು ಯಾಕೆ ಎಂಬ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ.
15 ವರ್ಷದ ಬಾಲಕ ಮೊಹಮದ್ ಅಮಿರ್ ಮತ್ತು ಮಾಲೀಕ ಆಸೀಫ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅಂಗಡಿ ಮಾಲೀಕನಿಗೆ ಈ ವಿಷಯ ತಿಳಿದಿಲ್ಲ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.