ಕನ್ನಡಿಗ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಮಾರಕ ದಾಳಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ನೆರವಿನಿಂದ ಭಾರತ ತಂಡ 9 ವಿಕೆಟ್ ಗಳಿಂದ ಆಫ್ಘಾನಿಸ್ತಾನ ತಂಡವನ್ನು ಮಣಿಸಿ ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0ಯಿಂದ ಕ್ಲೀನ್ ಸ್ವೀಪ್ ಮಾಡಿದೆ.
ಚೆನ್ನೈನಲ್ಲಿ ಶನಿವಾರ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡವನ್ನು 44.2 ಓವರ್ ಗಳಲ್ಲಿ 218 ರನ್ ಗಳಿಗೆ ಆಲೌಟ್ ಮಾಡಿದ ಭಾರತ ತಂಡ ಸುಲಭ ಗುರಿಯನ್ನು ಕೇವಲ 28.4 ಓವರ್ ಗಳಲ್ಲಿ ತಲುಪಿತು.



