ಮೀರತ್: ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಸಿಕೊಂಡ ಬೆಂಕಿಯಿಂದ ಮನೆಯಲ್ಲಿದ್ದ ಅವಳಿ ಸೇರಿ 5 ಮಕ್ಕಳು ಸೇರಿದಂತೆ ಒಟ್ಟಾರೆ 6 ಮಂದಿ ಸಜೀವದಹನಗೊಂಡ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಸಂಭವಿಸಿದೆ.
ಸೋಮವಾರ ಸಂಜೆ ಇಕ್ಬಾಲ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಅವಳಿ ಶಿಶುಗಳು ಸೇರಿದೆ.
ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ ಮಹಡಿಗೆ ವೇಗವಾಗಿ ಹಬ್ಬಿತ್ತು, ಕುಟುಂಬ ಸದಸ್ಯರು ಮನೆಯ ಒಳಗೆ ಸಿಲುಕಿಕೊಂಡರು. ಕಿರುಚಾಟ ಕೇಳಿ ಮತ್ತು ಜ್ವಾಲೆಯ ತೀವ್ರತೆ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು.
ಗಾಯಾಳುಗಳನ್ನು ಛಾವಣಿಯ ಮೂಲಕ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.ಎಸ್‌ಪಿ ಸಿಟಿ ಆಯುಷ್ ವಿಕ್ರಮ್ ಸಿಂಗ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು, ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಲಿಸಾರಿ ಗೇಟ್ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಒಬ್ಬ ಮಹಿಳೆ ಮತ್ತು ಐದು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ವಿದ್ಯುತ್ ಉಪಕರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ ಎಂದು ಎಸ್‌ಎಸ್‌ಪಿ ಪಾಂಡೆ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.



