ಭೂಕುಸಿತದಲ್ಲಿ 2000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ ಆಗಿರುವ ದಾರುಣ ಘಟನೆ ಪಪುವಾ ನ್ಯೂ ಗುನಿಯಾದಲ್ಲಿ ಶುಕ್ರವಾರ ಸಂಭವಿಸಿದೆ.
ಭೂಕುಸಿತದಿಂದ 2000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಕಟ್ಟಡಗಳು ಮತ್ತು ಆಹಾರ ಮಳಿಗೆಗಳು ಧರೆಗುರುಳಿವೆ. ಇದರಿಂದ ದೇಶದ ಆರ್ಥಿಕತೆ ಮೇಲೆ ದೊಡ್ಡ ದುಷ್ಪರಿಣಾಮ ಬೀರಿದೆ ಎಂದು ಪಪುವಾ ನ್ಯೂ ಗುನಿಯಾದ ಅಧಿಕಾರಿಗಳು ಹೇಳಿದ್ದಾರೆ.
ಹಲವಾರು ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದ್ದು, ಯಂಗ ಮತ್ತು ಎಂಬಲಿ ಎಂಬ ಗ್ರಾಮಗಳ ವರದಿ ಗಮನಿಸಿ 670 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿತ್ತು. ಆದರೆ ವಿಶ್ವಸಂಸ್ಥೆ ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದೆ.
ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ 4000ಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದರು. ಭೂಕುಸಿತ ಸಂಭವಿಸಿದ ಪ್ರದೇಶಗಳನ್ನು ಗುರುತು ಹಿಡಿಯುವುದು ಕೂಡ ಕಷ್ಟವಾಗಿದೆ. ಇದರಿಂದ ಪರಿಹಾರ ಕಾರ್ಯಕ ಕೂಡ ವಿಳಂಬವಾಗುತ್ತಿದ್ದು, ಇದರಿಂದ ಮೃತಪಟ್ಟವರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಭೀತಿ ಇದೆ.