Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಅಪರಾಧ

ಪ್ರೇಯಸಿಯ ಕೊಂದು 8 ತಿಂಗಳಿಂದ ಫ್ರಿಡ್ಜ್ ನಲ್ಲಿ ಶವ ಇರಿಸಿದ್ದ ವಿವಾಹಿತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
madhya pradesh
madhya pradesh

ಪ್ರೇಯಸಿಯನ್ನು ಕೊಲೆಗೈದ ವಿವಾಹಿತ 8 ತಿಂಗಳಿಂದ ಬಾಡಿಗೆ ಮನೆಯಲ್ಲಿದ್ದ ಫ್ರಿಡ್ಜ್ ನಲ್ಲಿ ಇರಿಸಿದ್ದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ದೇವಾಸ್ ಎಂಬಲ್ಲಿ ಈ ಘಟನೆ ನಡೆದಿದ್ದು, ಉಜ್ಜಯಿನಿ ಮೂಲದ ಸಂಜಯ್ ಪಾಟಿದಾರ್ ಎಂಬಾತ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ 30 ವರ್ಷದ ಪಿಂಕಿ ಪ್ರಜಾಪತಿ ಎಂಬಾಕೆಯನ್ನು ಕೊಂದು ಫ್ರಿಡಜ್ ನಲ್ಲಿ ಇರಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂಜಯ್ ಕಳೆದ ಜೂನ್ ತಿಂಗಳಲ್ಲೇ ಪಿಂಕಿಯನ್ನು ಕೊಲೆಗೈದು ಧರಿಸಿದ್ದ ಆಭರಣ ಸಮೇತ ಶವವನ್ನು ಫ್ರಿಡ್ಜ್ ನಲ್ಲಿ ಇರಿಸಿದ್ದ. ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದ ನಂತರ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸಂಜಯ್ ಕಳೆದ 5 ವರ್ಷಗಳಿಂದ ಪಿಂಕಿಯೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, ಇಬ್ಬರ ನಡುವೆ ದೈಹಿಕ ಸಂಪರ್ಕವೂ ಬೆಳೆದಿತ್ತು. ಇದರಿಂದ ಪಿಂಕಿ ಮದುವೆಯಾಗುವಂತೆ ಸಂಜಯ್ ಗೆ ಒತ್ತಡ ಹೇರುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಸಂಜಯ್ ತನ್ನ ಸ್ನೇಹಿತನೊಂದಿಗೆ ಸೇರಿ ಪಿಂಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

2023ರಲ್ಲಿ ಸಂಜಯ್ ಧೀರೇಂದ್ರ ಶ್ರೀವಾಸ್ತವ ಎಂಬವರ ಮನೆ ಬಾಡಿಗೆ ಪಡೆದಿದ್ದ ಸಂಜಯ್ ಕಳೆದ ಜೂನ್ ತಿಂಗಳಲ್ಲಿ ಆಕೆಯನ್ನ ಕೊಲೆ ಮಾಡಿದ್ದಾನೆ. ಇತ್ತೀಚೆಗೆ ಮನೆ ಖಾಲಿ ಮಾಡಿದ ನಂತರ ಶವ ಕೊಳೆತು ದುರ್ವಾಸನೆ ಬರಲಾರಂಭಿಸಿದೆ. ಈ ಬಗ್ಗೆ ಸ್ಥಳೀಯರು ಮನೆ ಮಾಲೀಕರಿಗೆ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡಿದಾಗ ಫ್ರಿಡ್ಜ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಕೂಡಲೇ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment