Monday, May 25, 2026
Google search engine
Homeಕ್ರೀಡೆಬೆಂಗಳೂರಿನಲ್ಲಿ ಪಂದ್ಯದ ವೇಳೆ ಕುಸಿದುಬಿದ್ದು ಮೃತಪಟ್ಟ ರಣಜಿ ಕ್ರಿಕೆಟ್ ಆಟಗಾರ

ಬೆಂಗಳೂರಿನಲ್ಲಿ ಪಂದ್ಯದ ವೇಳೆ ಕುಸಿದುಬಿದ್ದು ಮೃತಪಟ್ಟ ರಣಜಿ ಕ್ರಿಕೆಟ್ ಆಟಗಾರ

ಬೆಂಗಳೂರು: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ಲೀಗ್ ಪಂದ್ಯಾವಳಿ ವೇಳೆ ರಣಜಿ ಅನುಭವಿ ಕ್ರಿಕೆಟ್ ಆಟಗಾರ ಹೃದಯಾಘಾತದಿಂದ ಮೃತಪಟ್ಟಿರುವಂತಹ ಘಟನೆ ಬೊಮ್ಮಸಂದ್ರದ ಎಸ್​​ಎಲ್​​ಎಸ್​ ಮೈದಾನದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಎಸ್.ಎಲ್. ಅಕ್ಷಯ್ (36) ಮೃತ ಕ್ರಿಕೆಟ್ ಆಟಗಾರನಾಗಿದ್ದಾನೆ, ಬೊಮ್ಮಸಂದ್ರದ ಎಸ್​ಎಲ್​ಎಸ್ ಕ್ರೀಡಾಂಗಣದಲ್ಲಿ ಕೆಎಸ್​ಸಿಎ ನಸೂರ್ ಸ್ಮಾರಕ ಏಕದಿನ ಪಂದ್ಯಾವಳಿ ನಡೆಯುತ್ತಿತ್ತು.

ಅಕ್ಷಯ್ ಪಂದ್ಯದ ವೇಳೆ ಎಂದಿನಂತೆ ಉತ್ಸಾಹದಿಂದಲೇ ಪಾಲ್ಗೊಂಡು 4 ಓವರ್ ಬೌಲಿಂಗ್ ಮಾಡಿದ್ದರು. ಆದರೆ, ಆ ಬಳಿಕ ತಮಗೆ ಸ್ವಲ್ಪ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ಹೇಳಿ ಮೈದಾನದಿಂದ ಅರ್ಧಕ್ಕೆ ಹೊರಬಂದಿದ್ದರು. ಕ್ರೀಡಾಂಗಣದ ಹೊರಗೆ ಬಂದು ನೀರು ಕುಡಿಯುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಅಕ್ಷಯ್​​ರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಅವಲಹಳ್ಳಿಯ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments