Friday, November 22, 2024
Google search engine
Homeಅಪರಾಧಸಿಐಡಿ ತನಿಖೆ ವೇಳೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತನಿಖೆ ಎದುರಿಸಿದ ಮಹಿಳೆ ಆತ್ಮಹತ್ಯೆ!

ಸಿಐಡಿ ತನಿಖೆ ವೇಳೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತನಿಖೆ ಎದುರಿಸಿದ ಮಹಿಳೆ ಆತ್ಮಹತ್ಯೆ!

ಬೋವಿ ನಿಗಮದಲ್ಲಿ ನಡೆದ ಅಕ್ರಮಗಳ ಕುರಿತು ಸಿಐಡಿ ತನಿಖೆ ಎದುರಿಸಿದ್ದ ಮಹಿಳೆ ಬೆಂಗಳೂರಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಜೀವಾ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಬೋವಿ ನಿಗಮದಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ತನಿಖೆ ವೇಳೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜೀವಾ 11 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀವಾ ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಗಳನ್ನು ಪೂರೈಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಗುರುವಾರ ವಿಚಾರಣೆ ಎದುರಿಸಿದ್ದ ಜೀವಾ ತನಿಖೆ ವೇಳೆ ಕಿರುಕುಳ ನೀಡಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದು, ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments