Monday, June 15, 2026
Google search engine
Homeಅಪರಾಧಚೆಡ್ಡಿಯೊಳಗೆ ತಂಬಾಕು, ಸಿಮ್ ಕಾರ್ಡ್ ಇಟ್ಟು ಜೈಲಿಗೆ ಸಾಗಿಸಲು ಯತ್ನಿಸಿದ ಮಹಿಳೆ!

ಚೆಡ್ಡಿಯೊಳಗೆ ತಂಬಾಕು, ಸಿಮ್ ಕಾರ್ಡ್ ಇಟ್ಟು ಜೈಲಿಗೆ ಸಾಗಿಸಲು ಯತ್ನಿಸಿದ ಮಹಿಳೆ!

ಬೆಂಗಳೂರು: ಭಾರೀ ಭದ್ರತೆಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ರಿತಿಕಾ ರೈ (27) ಬಂಧಿತ ಆರೋಪಿಯಾಗಿದ್ದು, ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

ಕಳೆದ ಮಾ.26ರಂದು ಮಧ್ಯಾಹ್ನ 4 ಗಂಟೆಗೆ ಸಾಮಾನ್ಯ ಭೇಟಿಯ ವಿಭಾಗದಲ್ಲಿ ಆರೋಪಿ ರಿತಿಕಾ ರೈ ವಿಚಾರಣಾಧೀನ ಕೈದಿ ಫರ್ಹಾನ್ ಖಾನ್ ಅವರನ್ನು ಭೇಟಿ ಮಾಡಲು ಪಾಸ್ ಪಡೆದು ಬಂದಿದ್ದಳು.

ಸಾಮಾನ್ಯ ತಪಾಸಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅನುಮಾನ ಉಂಟಾಗಿ ಸವಿವರ ಪರಿಶೀಲನೆ ನಡೆಸಿದಾಗ, ಮಹಿಳೆ ತನ್ನ ದೇಹದ ಖಾಸಗಿ ಭಾಗದಲ್ಲಿ ತಂಬಾಕು ಪದಾರ್ಥಗಳ 3 ಪ್ಯಾಕೆಟ್‌ಗಳು ಹಾಗೂ ಏರ್ಟೆಲ್ 5ಜಿ ಸಿಮ್ ಕಾರ್ಡ್‌ಗಳನ್ನು ಅಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣವೇ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸರಿಗೆ ಒಪ್ಪಿಸಲಾಗಿದೆ. ಜೈಲು ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ರಿತಿಕಾ ರೈ ಮತ್ತು ಫರ್ಹಾನ್ ಖಾನ್ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ 2022 ಮತ್ತು ಬಿಎನ್‌ಎಸ್ ಸೆಕ್ಷನ್ 323 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments