ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ವಕ್ಫ್ ಮಂಡಳಿಗೆ ಸೇರಿದ ಸುಮಾರು 100 ಕೋಟಿ ರೂ. ಆಸ್ತಿಯನ್ನು ಗುತ್ತಿಗೆ ನೀಡುವ ವಿಚಾರದಲ್ಲಿ ಅಕ್ರಮ ಎಸೆಗಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲಾಗಿದೆ.
ಇದೇ ಅಮಾನತುಲ್ಲಾ ಖಾನ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಕಳೆದೆರಡು ವರ್ಷಗಳಿಂದ ತಮಗೆ ತನಿಖಾ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿದ್ದಾರೆ.
ನಾಲ್ಕು ದಿನಗಳ ಹಿಂದೆಯಷ್ಟೇ ನನ್ನ ಅತ್ತೆಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಬಗ್ಗೆ ಇಡಿ ಗಮನಕ್ಕೆ ತಂದಿದ್ದರೂ ಇದೇ ಸಂದರ್ಭದಲ್ಲಿ ಉದ್ದೇಶಪೂರ್ವಕವಣಗಿ ದಾಳಿ ನಡೆಸಲಾಗಿದೆ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿ ಕಡತ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯ ವೇಳೆ ವಿಚಾರಣೆಗೆ ಆಗಮಿಸುವೆ 4 ವಾರ ಸಮಯ ಕೊಡಿ ಎಂದು ಮನೆಗೆ ಆಗಮಿಸಿದ ಇಡಿ ಅಧಿಕಾರಿ ಜೊತೆ ಅಮಾನತುಲ್ಲಾ ಖಾನ್ ಹಾಸಿಗೆ ಮಲಗಿರುವ ಮಹಿಳೆಯನ್ನು ತೋರಿಸಿ ಮನವಿ ಮಾಡಿದ್ದಾರೆ. ಈ ವೇಳೆ ನಾವು ನಿಮ್ಮನ್ನು ಬಂಧಿಸುತ್ತೇವೆ ಎಂದು ಯಾಕೆ ಭಾವಿಸುತ್ತೀರಿ ಎಂದು ಮರು ಪ್ರಶ್ನಿಸಿದ್ದಾರೆ. ಮತ್ತೆಕೆ ಮನೆಗೆ ಬಂದಿದ್ದೀರಿ ಎಂದು ಶಾಸಕ ಮರು ಪ್ರಶ್ನಿಸಿದ ವೀಡಿಯೊ ಇದೀಗ ವೈರಲ್ ಆಗಿದೆ.