Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: 150 ಯುವಕರ ವಂಚನೆ ಜಾಲ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
upendra priyanka

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿ 1.5 ಲಕ್ಷ ರೂ. ಸುಲಿಗೆ ಮಾಡಿದ್ದ ಸೈಬರ್ ವಂಚಕನನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.

ಸೆಪ್ಟೆಂಬರ್ 15ರಂದು ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣದಲ್ಲಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಸದಾಶಿವನಗರ ಪೊಲೀಸರು ಬಿಹಾರದಲ್ಲಿ ಸೈಬರ್ ವಂಚಕನ ಜಾಲ ಹಿಡಿದು ಹೋದಾಗ ಆರೋಪಿಯ 20ರಿಂದ 25 ವಯಸ್ಸಿನ 150 ಸಹಚರರು ಸೈಬರ್ ವಂಚನೆ ಜಾಲದಲ್ಲಿ ಇರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ಸೆ.15ರಂದು ಉಪೇಂದ್ರ ದಂಪತಿಯ ಮೊಬೈಲ್ ಹ್ಯಾಕ್ ಆಗಿತ್ತು. ಆನ್​ಲೈನ್​ನಲ್ಲಿ ಕೆಲವು ವಸ್ತುಗಳನ್ನು ಪ್ರಿಯಾಂಕಾ ಬುಕ್​ ಮಾಡಿದ್ದರು. ಆಗ ಮೊಬೈಲ್​​ಗೆ ಲಿಂಕ್​ ಬಂದಿದ್ದು, ಆ ಲಿಂಕ್​ ಅನ್ನು ಪ್ರಿಯಾಂಕ ಕ್ಲಿಕ್​ ಮಾಡಿದ್ದರು. ಬಳಿಕ ಓಟಿಪಿ ಕೇಳಿದ ವಂಚಕ ವಾಟ್ಸಾಪ್​ ಹ್ಯಾಕ್ ಮಾಡಿದ್ದ.

ಆರೋಪಿಯು ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣ ಕಳುಹಿಸುವಂತೆ ಮೆಸೇಜ್​ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್​ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು.

ಹಣ ಅಗತ್ಯವಿದೆ ಎಂದು ಪ್ರಿಯಾಂಕ ಅವರ ವಾಟ್ಸ್ಯಾಪ್​ನಿಂದ ಆರೋಪಿ ಹಲವರಿಗೆ ಮೆಸೇಜ್​ ಮಾಡಿದ್ದು, ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ. ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್​ಗೆ ಐವತ್ತು ಸಾವಿರ ಹಾಕಿದ್ದರು. ಕೆಲವರು ಅನುಮಾನಗೊಂಡು ಪ್ರಿಯಾಂಕಾ ಅವರ ನಂಬರ್​​ಗೆ ಕರೆ ಮಾಡಿದರೆ ಕಾಲ್​ ಕಟ್​​ ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಸೈಬರ್​ ವಂಚಕನ ಅಕೌಂಟ್​​ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment