ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಭಾಕರ್ ಅವರ ಪುತ್ರ ವಿನೋದ್ ಪ್ರಭಾಕರ್ ಅಸ್ವಸ್ಥರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿದ್ದಾಗ ದಿಢೀರ್ ಅಸ್ವಸ್ಥಗೊಂಡ ಅವರನ್ನು ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಲರಾಮ ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ನಟ ವಿನೋದ್ ಪ್ರಭಾಕರ್ ರಕ್ತದೊತ್ತಡ ಸಮಸ್ಯೆಯಿಂದ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದ್ದು, ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಗರಭಾವಿಯ ಖಾಸಗಿ ಆಸ್ಪತ್ರೆಯ ಕಾರ್ಡಿಯಾ ಕೇರ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಬೆಳಗ್ಗೆಯಿಂದಲೇ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.



