Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಮನರಂಜನೆ

ಸಿಸಿಬಿಗೆ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ಹಸ್ತಾಂತರ: 30 ಎಫ್ ಐಆರ್ ದಾಖಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
ramya

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಚಿತ್ರ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ರಮ್ಯಾ ನೀಡಿದ ದೂರನ್ನು ಸ್ವೀಕರಿಸಿದ್ದು ರಮ್ಯಾ 43 ಖಾತೆಗಳ ವಿರುದ್ಧ ದೂರು ನೀಡಿದ್ದು, ಇವುಗಳ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವಹಿಸಲಾಗಿದೆ ಎಂದರು.

ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್​ಸ್ಟ್ರಾಗಾಂ ಖಾತೆಗಳ ಪೈಕಿ ದೂರು ನೀಡಿದ ಬೆನ್ನಲ್ಲೇ 30 ಖಾತೆಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28 ರಂದು ಖುದ್ದು ರಮ್ಯಾ ಅವರೇ ತೆರಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು.

ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment