Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿ: ಸಚಿವ ಕೆಜೆ ಜಾರ್ಜ್‌ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
KJ George
KJ George

ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ಇಲಾಖೆಯ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌, ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು  ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು.  ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ ಎಂದು ಅವರು ವಿವರ ನೀಡಿದರು.

“ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.

“ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ  ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು  ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment