Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಜ್ಯೋತಿಷ್ಯ

ಸಂಕ್ರಾಂತಿ ನಂತರ ಅರಸನ ಅರಮನೆಗೆ ಕಾರ್ಮೊಡ ಕವಿದೀತು: ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
kodimatha swamiji
kodimatha swamiji

ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ದೇಶಕ್ಕೆ ವಿಶ್ವವೇ ತಿರುಗಿ ನೋಡುವ  ಬಹುದೊಡ್ಡ ಗಂಡಾಂತರ ಕಾದಿದ್ದು, ಭಾರೀ ಪ್ರಮಾಣದ  ಮಟ್ಟಿನ ಆಘಾತ ಎದುರಾಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ. ಮುಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಇಲ್ಲವಾದಲ್ಲಿ ಸಮಸ್ಯೆ ಇದೆ ಎಂದಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಂಕ್ರಾಂತಿವರೆಗೆ ಏನು ತೊಂದರೆ ಇಲ್ಲ. ಬಳಿಕ ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಮನಸ್ಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. ಮಾನವ ಜ್ಞಾನ ಹಾಗೂ ವಿವೇಕವನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಪ್ರಕೃತಿ ಹಾಗೂ ವೃಕ್ಷಗಳಿಗೆ ಅಗಾಧ ಶಕ್ತಿ ಇದೆ. ಪಂಚತಂತ್ರ ವೃಕ್ಷಗಳಲ್ಲಿ ಹೆಚ್ಚು ಆಮ್ಲಜನಕ ಉತ್ಪಾದನೆಯಾಗುತ್ತದೆ. ಅವು ದೈವ ವೃಕ್ಷಗಳಾಗಿವೆ ಎಂದು ಸ್ವಾಮೀಜಿ ಹೇಳಿದರು.

ಮೂರು ವಾರಗಳ ಹಿಂದೆ ಹಾಸನದಲ್ಲಿ ಭವಿಷ್ಯ ಹೇಳಿದ್ದ ಸ್ವಾಮೀಜಿ, ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುತ್ತದೆ. ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನ ಜೀವನ ಅಸ್ಥಿರಗೊಳ್ಳಲಿದೆ ಎಂದು ಹೇಳಿದ್ದರು.

ಮೇ ತಿಂಗಳಲ್ಲಿ ಬೆಳಗಾವಿಯಲ್ಲಿ ಮಾತನಾಡಿದ್ದ ಸ್ವಾಮೀಜಿ, ಲೋಕಕ್ಕೆ ಜಲ, ವಾಯು ಗಂಡಾಂತರ ಎದುರಾಗಲಿದೆ ಎಂದಿದ್ದರು. ಹಿಮಾಲಯ ಕರಗಿಹೋಗಲಿದೆ. ಮೇಘಸ್ಫೋಟ ಸಾಧ್ಯತೆಗಳಿವೆ. ಭೂಕಂಪಗಳು ಸಂಭವಿಸಲಿವೆ ಎಂದಿದ್ದರು.

ರಾಜಕೀಯ ಮುಖಂಡರಿಗೆ ಸಾವಿನ ಭಯ ಇದೆ ಎಂದು ಹೇಳಿದ್ದರು. ಇತ್ತೀಚೆಗೆ ಬಾಗಲಕೋಟೆಯಲ್ಲಿ ಮಾತನಾಡಿದ್ದ ಕೋಡಿಶ್ರೀಗಳು, ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎನ್ನುವ ಮಾತಿದೆ. ಹಾಲುಮತದ ಸಮುದಾಯದವರ ಕೈಯಲ್ಲಿ ರಾಜ್ಯದ ಅಧಿಕಾರವಿದೆ, ಬಿಡಿಸುವುವುದು ಅಷ್ಟು ಸುಲಭವಲ್ಲ, ಅವರಾಗಿಯೇ ಬಿಡಬೇಕೇ ಹೊರತು, ನೀವು ಬಿಡಿಸಿಕೊಳ್ಳುವುದು ಸುಲಭವಲ್ಲ ಎಂದು ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment