Tuesday, June 30, 2026
Google search engine
Homeರಾಜಕೀಯಕೃಷಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ: ಷರತ್ತು ಅನ್ವಯ!

ಕೃಷಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ: ಷರತ್ತು ಅನ್ವಯ!

ಕೃಷಿ ಸಚಿವ ಶಿವಾನಂದ ಪಾಟೀಲ್ ದಿಢೀರನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿಧಾನಸಭಾ ಅಧ್ಯಕ್ಷ ಯುಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲಿನಂತೆ ನಾನು ಬಸವನ ಬಾಗೇವಾಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಶಿವಾನಂದ ಪಾಟೀಲ್ ಪತ್ರದಲ್ಲಿ ಹೇಳಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿ ಬಸವನ ಬಾಗೇವಾಡಿ ಕ್ಷೇತ್ರದಿಂದ ಸ್ಪರ್ದಿಸುವ ಸವಾಲು ಹಾಕಿದ್ದಾರೆ. ಹಾಗಾಗಿ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದರೆ ಮಾತ್ರ ನನ್ನ ರಾಜೀನಾಮೆ ಪತ್ರ ಅಂಗೀಕರಿಸಬೇಕು ಎಂದು ವಿಧಾನಸಭಾ ಅಧ್ಯಕ್ಷರಿಗೆ ಷರತ್ತು ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments