Thursday, May 14, 2026
Google search engine
Homeರಾಜ್ಯರಾಜ್ಯದ ಎಲ್ಲಾ ಬಿ ಖಾತಾ ಆಸ್ತಿ ಎ ಖಾತಾಗೆ ಬದಲು: ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿ ಎ ಖಾತಾಗೆ ಬದಲು: ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಂತ ಹಂತವಾಗಿ ರಾಜ್ಯದ ಸ್ಥಳೀಯ ಸಂಸ್ಥೆಗಳವರೆಗೆ ಎಲ್ಲಾ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಗಿ ಬದಲಿಸಲು ತೀರ್ಮಾನಿಸಲಾಯಿತು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ.

ಸಚಿವ ಸಂಪುಟ ತೀರ್ಮಾನಗಳು

KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿ

ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 TPD ಬಯೋ ಸಿಎನ್​ಜಿ ಘಟಕ ಸ್ಥಾಪನೆ

KKRDB ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ

KKRDB ಅನುದಾನದಿಂದ ಕಲಬುರಗಿಯಲ್ಲಿ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ

127.40 ಕೋಟಿ ಅಂದಾಜು ಮೊತ್ತದಲ್ಲಿ PM-ABHIM ಯೋಜನೆಯಡಿ 2024-26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 SC-AAM (Rural Health and Wellness Centre) ಸ್ಥಾಪನೆ

24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

40 ಕೋಟಿ ರೂ. ಅಂದಾಜು ಮೊತ್ತದಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿ

ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ

ಚಾಮರಾಜನಗರ ಜಿಲ್ಲೆಯಲ್ಲಿ166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ

ಹಳಿಯಾಳ ಪಟ್ಟಣಕ್ಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ

ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ

11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ

ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಭೂಮಿ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರಿಗೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸನ್ನಡತೆ ಆಧಾರದಲ್ಲಿ 33 ಕೈದಿಗಳಿಗೆ ಬಿಡುಗಡೆ ಭಾಗ್ಯ

ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments