Monday, November 25, 2024
Google search engine
Homeತಾಜಾ ಸುದ್ದಿಮಲಯಾಳಂ ಕಲಾವಿದರ ಸಂಘಕ್ಕೆ ಮೋಹನ್ ಲಾಲ್ ಸೇರಿ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ

ಮಲಯಾಳಂ ಕಲಾವಿದರ ಸಂಘಕ್ಕೆ ಮೋಹನ್ ಲಾಲ್ ಸೇರಿ ಎಲ್ಲಾ ಪದಾಧಿಕಾರಿಗಳು ರಾಜೀನಾಮೆ

ಹಿರಿಯ ನಟ ಮೋಹನ್ ಲಾಲ್ ಅಧ್ಯಕ್ಷರಾಗಿರುವ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ನಟರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಮೋಹನ್ ಲಾಲ್ ಮತ್ತು ಇತರೆ 17 ಮಂದಿ ನಟರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬೆನ್ನಲ್ಲೇ ಮೋಹನ್ ಲಾಲ್ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದರಿಂದ ಸಂಘದ ಆಡಳಿತವನ್ನು ವಿಸರ್ಜನೆಗೊಳಿಸಲಾಗಿದ್ದು, ಶೀಘ್ರದಲ್ಲೇ ನೂತನ ಪದಾಧಿಕಾರಿಗಳಿಗಾಗಿ ಚುನಾವಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments