ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸೆಪ್ಟೆಂಬರ್ 15ರೊಳಗೆ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪ್ರಾಮಾಣಿಕವಾಗಿ ನಡೆಯುತ್ತಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.
ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅಮೆರಿಕ ಪ್ರವಾಸಕ್ಕೆ ತೆರಳಿದ್ದು, ಬೆಂಗಳೂರಿಗೆ ಮರಳುವ ಮುನ್ನ ಎಲ್ಲಾ ರಸ್ತೆ ಗುಂಡಿಗಳು ಮುಚ್ಚಿರಬೇಕು. ಇಲ್ಲದಿದ್ದರೆ ಎಷ್ಟು ಅಧಿಕಾರಿಗಳು ಅಮಾನತುಗೊಳ್ಳುತ್ತಾರೋ ನನಗೆ ಗೊತ್ತಿಲ್ಲ ಎಂದು ಗಡುವು ನೀಡಿದ್ದರು.