ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ತಿಂಗಳ ಹಿಂದೆ ಆರಂಭಗೊಂಡ `ಭಾರತ್ ನ್ಯಾಯ ಯಾತ್ರೆ’ ಇಂದು ವಾಣಿಜ್ಯ ನಗರಿ ಮುಂಬೈನಲ್ಲಿ ಅಂತ್ಯಗೊಳ್ಳಲಿದೆ.
ಸುಮಾರು 6700 ಕಿ.ಮೀ. ಉದ್ದದ ಪಾದಯಾತ್ರೆ ಮುಂಬೈನಲ್ಲಿ ಭಾನುವಾರ ಸಂಜೆ ತೆರೆ ಬೀಳಲಿದ್ದು, ಮಹಾರಾಷ್ಟ್ರದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸೇರಿದಂತೆ ಮೈತ್ರಿ ಪಕ್ಷಗಳು ಕೈ ಜೋಡಿಸಲಿವೆ ಎಂದು ಹೇಳಲಾಗಿದೆ.
ತಮಿಳುನಾಡಿನ ಡಿಎಂಕೆ ನಾಯಕ ಸ್ಟಾಲಿನ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್, ಜಾರ್ಖಂಡ್ ಸಿಎಂ ಚಂಪಾ ಸೊರೆನ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದು, ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.