Thursday, May 14, 2026
Google search engine
Homeದೇಶಬಂಡೆಕಲ್ಲು ಬಿದ್ದು ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಬಂಡೆಕಲ್ಲು ಬಿದ್ದು ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಭಾರೀ ಮಳೆಯಿಂದಾಗಿ ಕಲ್ಲು ಬಂಡೆಗಳು ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, ಇದರಿಂದ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತದಿಂದ ಯಾತ್ರಿಗಳು ಸಿಲುಕಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸ್ಥಳೀಯರು ಈಗಾಗಲೇ ಕೆಲವರನ್ನು ರಕ್ಷಿಸಿದ್ದಾರೆ. ಯಾತ್ರಿಗಳು ಮಾರ್ಗದಲ್ಲಿ ಸುರಕ್ಷತಾ ಕಂಬಿಗಳನ್ನು ಹಿಡಿದು ಆಸರೆ ಪಡೆದಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿರುವ ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಯಾತ್ರೆಯ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತಕ ವರ್ಷ ಇಲ್ಲಿಯವರೆಗೆ 2 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ. ಜು.3 ರಂದು ಆರಂಭಗೊಂಡಿದ್ದ ಯಾತ್ರೆ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments