Monday, June 15, 2026
Google search engine
Homeರಾಜ್ಯಒಳ ಮೀಸಲು ವಿವಾದಕ್ಕೆ ತೆರೆ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲು ವಿವಾದಕ್ಕೆ ತೆರೆ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆ ಮಾಡಲು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ ಕೈಗೊಂಡಿದೆ.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಳಗ ಪೈಕಿ ಅವಕಾಶ ವಂಚಿತ ಉಪಜಾತಿಗಳಿಗೆ ಒಳಮೀಸಲು ಕಲ್ಪಿಸಬೇಕೆಂಬ ಸುಮಾರು ದಶಕಗಳ ಹಕ್ಕೋತ್ತಾಯ ಹಾಗೂ ಹೋರಾಟಗಳು ನಡೆದಿದ್ದು, ಇದೀಗ ಈ ಸಂಬಂಧ ಸಿದ್ದರಾಮಯ್ಯ ಸರ್ಕಾರ, ಅಳೆದು ತೂಗಿ ಕೊನೆಗೂ ಮಹತ್ವದ ನಿರ್ಣಯ ಕೈಗೊಂಡು ಒಳಮೀಸಲಾತಿ ಜಾರಿಗೆಗೆ ತೀರ್ಮಾನಿಸಿದೆ.

ವಿಶೇಷ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
ಒಳಮೀಸಲಾತಿಗೆ ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅಂತಿಮವಾಗಿರಲಿದೆ ಎಂದು ಹೇಳಿದರು.

56,432 ಹುದ್ದೆ ಭರ್ತಿ ಮಾಡಲು ಘೋಷಿಸಿದ್ದೆವು. ಒಳ ಮೀಸಲಾತಿಯಂತೆ ನೇಮಕಾತಿ ನಡೆಸಲು ಹುದ್ದೆಗಳಿಗೆ ಮತ್ತೊಮ್ಮೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಖಾಲಿ ಇರುವ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ. ಈಗ ಒಳಮೀಸಲಾತಿ ನಿರ್ಧಾರ ಆಗಿದೆ, ಇನ್ನು ನೇಮಕಾತಿ ಶುರು ಮಾಡುತ್ತೇವೆ. ನಮ್ಮ ಪಕ್ಷದ ನಿಲುವು ಸಮಬಾಳು-ಸಮಪಾಲು. ಯಾರಿಗೂ ಅನ್ಯಾಯವಾಗಬಾರದು ಎಂಬುವುದು ನಮ್ಮ ನಿಲುವು. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಎಲ್ಲ ದಲಿತ ಸಂಘಟನೆಗಳು ಒಪ್ಪಿಕೊಳ್ಳುತ್ತವೆ ಎಂಬ ವಿಶ್ವಾಸವಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದು, ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೂ ಭರವಸೆ ನೀಡಲಾಗಿತ್ತು. ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್‌ 7 ನ್ಯಾಯಮೂರ್ತಿಗಳ ಪೀಠ ಆದೇಶ ನೀಡಿತ್ತು. ಆ ತೀರ್ಪು ಬಂದ ನಂತರ ನಾವು ನಿವೃತ್ತ ನ್ಯಾ.ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದ್ದೆವು. ವರದಿಯನ್ನು ಸಂಪುಟದಲ್ಲಿಟ್ಟು ಸರ್ವಾನುಮತದಿಂದ ಅಂಗೀಕರಿಸಿದ್ದು, ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ ಒಳಮೀಸಲಾತಿ ನಿಗದಿ ಮಾಡಿದ್ದೆವು.

ಈ ಮೊದಲು ಒಳಮೀಸಲಾತಿ ಪ್ರಮಾಣ 6, 6, 5 ಎಂದು ವರ್ಗೀಕರಣ ಮಾಡಿದ್ದೆವು. ನಂತರ ರೋಸ್ಟ‌ರ್ ಬಿಂದುವಿನಲ್ಲಿ ಗೊಂದಲ ಉಂಟಾಯಿತು. ನಂತರ ಅಲೆಮಾರಿ ಸಮುದಾಯ ನ್ಯಾಯಾಲಯದ ಮೊರೆ ಹೋದರು. ಮೀಸಲಾತಿ ಪ್ರಮಾಣ ಶೇ.50 ಮೀರಬಾರದೆಂದು ಕೋರ್ಟ್ ಆದೇಶಿಸಿತ್ತು. ಇಂದ್ರ ಸಾಕ್ಷಿ ಕೇಸ್‌ನಲ್ಲಿ ಮೀಸಲಾತಿ ಪ್ರಮಾಣ ಶೇ. 50 ಆದೇಶವಿತ್ತು.

ಎಸ್‌ಸಿ ಮೀಸಲಾತಿ ಪ್ರಮಾಣ ಶೇ.17 ಅನ್ವಯ ನಾವು ಪ್ರವರ್ಗ ಎಡಗೈ-6, ಬಲಗೈ-6, ಇತರೆ-5 ಎಂದು ವರ್ಗೀಕರಣ ಮಾಡಿದ್ದೆವು. ಆದರೆ ಕೋರ್ಟ್ ಮೀಸಲಾತಿ ಪ್ರಮಾಣ ಶೇ.50 ಮೀರುವಂತಿಲ್ಲ. ಈಗ ಒಳಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್​​ ಕೆ ಪಾಟೀಲ್ ಮಾತನಾಡಿ, ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಾರಗಳಿಂದ ಚರ್ಚೆ ನಡೆದಿತ್ತು. ರಾಷ್ಟ್ರಕ್ಕೆ ಮಾದರಿ ಆಗಬಲ್ಲ ಮಹತ್ವವಾದ ಜನರ ಬದುಕಿಗೆ ವಿಶೇಷ ತಿರುವನ್ನು ನೀಡುವ ತೀರ್ಮಾನ ತೆಗೆದುಕೊಂಡಿದೆ.

ರೋಸ್ಟರ್ ವಿಚಾರದಲ್ಲಿ ಗೊಂದಲ ಸೃಷ್ಡಿ ಆಗಿತ್ತು. ಸೂಕ್ತವಾದ ಪರಿಪೂರ್ಣ ಪರಿಹಾರ ಕಂಡು ಮಾರ್ಗದರ್ಶನ ಮಾಡಿ ಪರಿಹಾರ ಕಂಡುಕೊಳ್ಳಲು ಸಿಎಂ ಯಶಸ್ವಿಯಾಗಿದ್ದಾರೆ ಎಂದರು.

ಪ್ರಣಾಳಿಕೆಯಲ್ಲೂ ಭರವಸೆ:

ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದು, ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೂ ಭರವಸೆ ನೀಡಲಾಗಿತ್ತು. ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್​ನ 7 ನ್ಯಾಯಮೂರ್ತಿಗಳ ಪೀಠ ಆದೇಶ ನೀಡಿತ್ತು. ಆ ತೀರ್ಪು ಬಂದ ನಂತರ ನಾವು ನಿವೃತ್ತ ನ್ಯಾ.ನಾಗಮೋಹನ ದಾಸ್ ಸಮಿತಿ ರಚನೆ ಮಾಡಿದ್ದೆವು. ವರದಿಯನ್ನು ಸಂಪುಟದಲ್ಲಿಟ್ಟು ಸರ್ವಾನುಮತದಿಂದ ಅಂಗೀಕರಿಸಿದ್ದು, ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ ಒಳಮೀಸಲಾತಿ ನಿಗದಿ ಮಾಡಿದ್ದೆವು.
ನ್ಯಾಯಾಲಯದ ಮೊರೆ

ಒಳಮೀಸಲಾತಿ ಪ್ರಮಾಣ 6, 6, 5 ಎಂದು ವರ್ಗೀಕರಣ ಮಾಡಿದ್ದೆವು. ನಂತರ ರೋಸ್ಟರ್ ಬಿಂದುವಿನಲ್ಲಿ ಗೊಂದಲ ಉಂಟಾಯಿತು. ನಂತರ ಅಲೆಮಾರಿ ಸಮುದಾಯ ನ್ಯಾಯಾಲಯದ ಮೊರೆ ಹೋದರು. ಮೀಸಲಾತಿ ಪ್ರಮಾಣ 50% ಮೀರಬಾರದೆಂದು ಕೋರ್ಟ್ ಆದೇಶಿಸಿತು.

ಇಂದ್ರಾ ಸಹಾನಿ ಕೇಸ್​ನಲ್ಲಿ ಮೀಸಲಾತಿ ಪ್ರಮಾಣ 50% ಆದೇಶವಿತ್ತು. SC ಮೀಸಲಾತಿ ಪ್ರಮಾಣ 17% ಅನ್ವಯ. ನಾವು ಪ್ರವರ್ಗ ಎ-6, ಬಿ-6, ಸಿ-5 ಎಂದು ವರ್ಗೀಕರಣ ಮಾಡಿದ್ದೆವು. ಆದರೆ ಕೋರ್ಟ್ ಮೀಸಲಾತಿ ಪ್ರಮಾಣ 50% ಮೀರುವಂತಿಲ್ಲ ಎಂದಿದೆ. ಏ.16ರ ಕ್ಯಾಬಿನೆಟ್​ನಲ್ಲಿ ಒಳಮೀಸಲಾತಿ ವಿಚಾರ ಚರ್ಚೆಗೆ ಬಂದಿತ್ತು. ಒಳಮೀಸಲಾತಿ ವಿಚಾರವಾಗಿ ವಿಶೇಷ ಸಂಪುಟ ಸಭೆಗೆ ನಿರ್ಧರಿಸಿದೆವು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments