Thursday, May 14, 2026
Google search engine
Homeರಾಜ್ಯವೀಡಿಯೋ ಮಾಡಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ

ವೀಡಿಯೋ ಮಾಡಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ

ತುಮಕೂರು: ಹಿರಿಯ ಅಧಿಕಾರಿಯ ಕಾಟ ತಡೆಯಲಾರದೇ ವೀಡಿಯೊ ಮಾಡಿದ್ದೂ ಅಲ್ಲದೇ ಡೆತ್ ನೋಟ್ ಬರೆದಿಟ್ಟು ಸಹಾಯಕ ನಿರ್ದೇಶಕ ಸಮಾಕ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments