ರಾಜ್ಯದಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಚಿನ್ನದಂಗಡಿ ದರೋಡೆ ಪ್ರಕರಣ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಸನಪುರದ ಗನ್ ತೋರಿಸಿದ ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ಮಂಗಳವಾರ ನಡೆದಿದೆ.
ಬೈಕ್ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಗನ್ ತೋರಿಸಿ ರಾಮ್ದೇವ್ ಜ್ಯುವೆಲ್ಲರಿಗೆ ನುಗ್ಗಿ ಕೈಗೆ ಸಿಕ್ಕ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.
ಖದೀಮರು ಕರಾಮತ್ತು ಸಿಸಿಟಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



